ಮಡಿಕೇರಿ, ಮಾ. 17: ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಮ್ಮುಖದಲ್ಲಿ ನೋವೆಲ್ ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷ ಹೆಚ್.ಈ.ಅಬ್ಬಾಸ್, ಕಾರ್ಯದರ್ಶಿ ಸುಕುಮಾರ, ಆರೋಗ್ಯ ಸಹಾಯಕಿ ಸಿ.ಎಸ್. ಪ್ರಮೀಳ, ಆಶಾ ಕಾರ್ಯಕರ್ತೆ ಯರಾದ ಕವಿತ, ಗೀತಾ, ಅಂಗನವಾಡಿ ಕಾರ್ಯಕರ್ತೆ ಎಸ್.ಎನ್.ಸಾವಿತ್ರಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.