ಸೋಮವಾರಪೇಟೆ, ಮಾ. 17: ಇಲ್ಲಿನ ಸೀತಾ ಬಳಗದ ವತಿಯಿಂದ ಶ್ರೀರಾಮ ಮಂದಿರದಲ್ಲಿ ವಾರ್ಷಿಕ ಸತ್ಯನಾರಾಯಣ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು.
ದೇವಾಲಯದ ಅರ್ಚಕರಾದ ಮೋಹನ್ಮೂರ್ತಿ ಶಾಸ್ತ್ರೀ ಅವರ ಪೌರೋಹಿತ್ವದಲ್ಲಿ ಸತ್ಯನಾರಾಯಣ ದೇವರಿಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನೆರವೇರಿತು. ಸೀತಾ ಬಳಗದ ಅಧ್ಯಕ್ಷೆ ಲೀಲಾ ನಿರ್ವಾಣಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕ ಭಕ್ತಾದಿಗಳು ಪೂಜಾ ಕಾರ್ಯದಲ್ಲಿ ಭಾಗಿಯಾಗಿದ್ದರು.