ಸೋಮವಾರಪೇಟೆ, ಮಾ. 17: ತಾಲೂಕಿನ ಸಂಗಯ್ಯನಪುರ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.
ಸರ್ಕಾರದಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ ಸಿಗುವ ಸೌಲಭ್ಯಗಳು, ಮಾತೃ ವಂದನಾ ಮತ್ತು ಮಾತೃಶ್ರೀ ಯೋಜನೆಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸಾವಿತ್ರಿ ಅವರು ಮಾಹಿತಿ ನೀಡಿದರು.
ಆಶಾ ಕಾರ್ಯಕರ್ತೆ ತಂಗಮಣಿ ಅವರು ಬೇಸಿಗೆಯಲ್ಲಿ ಸಾಮಾನ್ಯವಾಗಿ ಬರುವ ಖಾಯಿಲೆಗಳನ್ನು ತಡೆಗಟ್ಟುವ ವಿಧಾನಗಳ ಬಗ್ಗೆ ವಿವರಿಸಿದರು. ಮಕ್ಕಳ ಸಹಾಯವಾಣಿ ಕೇಂದ್ರದ ಬಿ.ಕೆ. ಕುಮಾರಿ ಅವರು, ಬಾಲ್ಯವಿವಾಹ ತಡೆ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಬ್ಬಯ್ಯ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಮಕ್ಕಳ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.