ಶನಿವಾರಸಂತೆ, ಮಾ. 18: ಸಮೀಪದ ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸರಕಾರ ಗುತ್ತಿಗೆ ಆಧಾರದ ಮೇಲೆ ವೈದ್ಯೆ ಡಾ. ಅನುಶ್ರೀ ಥಾಮಸ್ ಅವರನ್ನು ನೇಮಕ ಮಾಡಿದೆ. ಆರೋಗ್ಯ ಕೇಂದ್ರದಲ್ಲಿ ಹಲವಾರು ವರ್ಷಗಳಿಂದ ಖಾಯಂ ವೈದ್ಯರಿಲ್ಲದೆ ಸಮಸ್ಯೆ ಉಂಟಾಗಿತ್ತು. ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸಾರ್ವಜನಿಕರ ಸಹಕಾರದೊಂದಿಗೆ ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ, ಹೋರಾಟಗಳು ನಡೆದಿದ್ದವು.
ಇದೀಗ ಸರಕಾರ ಆದೇಶ ಹೊರಡಿಸಿ ಡಾ. ಅನುಶ್ರೀ ಥಾಮಸ್ ಅವರ ನೇಮಕ ಮಾಡಿದೆ. ಅವರು ತಾ. 16 ರಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ.