ವೀರಾಜಪೇಟೆ, ಮಾ. 18: ವೀರಾಜಪೇಟೆಯ ಕೊಡಗು ಉಪಾಧ್ಯಾಯರ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಅಧ್ಯಕ್ಷರಾಗಿ ಕೆ.ಎಂ. ರೋಹಿತ್‍ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಎ.ವಿ. ಮಂಜುನಾಥ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಎಂ.ಎಸ್. ಮೋಹನ್‍ಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.