ಮಡಿಕೇರಿ, ಮಾ. 18: ವಿದೇಶಗಳಿಂದ ತಾಯ್ನಾಡಿಗೆ ಹಿಂತಿರುಗುತ್ತಿರುವ ಮಂದಿಯನ್ನು ಗುರುತಿಸಿ, ಆರೋಗ್ಯ ತಪಾಸಣೆ ಕೈಗೊಳ್ಳುವ ಮುಖಾಂತರ, ಕೊಡಗಿನ ಜನತೆಗೆ ಕೊರೊನಾ ಸೋಂಕು ಹರಡದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿ ದ್ದಾರೆ. ರಾಜ್ಯ ಸರಕಾರದ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್
(ಮೊದಲ ಪುಟದಿಂದ) ಅವರ ಉಪಸ್ಥಿತಿಯಲ್ಲಿ ಇಂದು ಜಿಲ್ಲಾಡಳಿತ ಭವನದಲ್ಲಿ ಜರುಗಿದ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಈ ವಿವರ ನೀಡಿದರು.ಅಗತ್ಯ ಸೌಲಭ್ಯ ಕಲ್ಪಿಸಿ ಕೊರೊನಾ ವೈರಸ್ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಸೂಚಿಸಿದರು. ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ (ಐಸೋಲೇಷನ್) ಇರಿಸಿರುವ ಶಂಕಿತರಿಗೆ ದಿನಪತ್ರಿಕೆ, ಟಿವಿ, ವೈಫೈ ಸೇವೆ ಕಲ್ಪಿಸುವುದು ಹಾಗೂ ಗುಣಮಟ್ಟದ ಆಹಾರವನ್ನು ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ವೈರಸ್ ಆಗಿರುವುದರಿಂದ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಲ್ಲಿ, ಇದನ್ನು ನಿಯಂತ್ರಣ ಮಾಡಬಹುದಾಗಿದೆ. ಸರ್ಕಾರ ಹೊರಡಿಸುವ ಸಲಹೆ, ಸೂಚನೆಗಳನ್ನು ತಪ್ಪದೆ ಪಾಲಿಸಬೇಕಿದ್ದು, ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು. (ಮೊದಲ ಪುಟದಿಂದ) ಅವರ ಉಪಸ್ಥಿತಿಯಲ್ಲಿ ಇಂದು ಜಿಲ್ಲಾಡಳಿತ ಭವನದಲ್ಲಿ ಜರುಗಿದ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಈ ವಿವರ ನೀಡಿದರು.ಅಗತ್ಯ ಸೌಲಭ್ಯ ಕಲ್ಪಿಸಿ ಕೊರೊನಾ ವೈರಸ್ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಸೂಚಿಸಿದರು.
ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ (ಐಸೋಲೇಷನ್) ಇರಿಸಿರುವ ಶಂಕಿತರಿಗೆ ದಿನಪತ್ರಿಕೆ, ಟಿವಿ, ವೈಫೈ ಸೇವೆ ಕಲ್ಪಿಸುವುದು ಹಾಗೂ ಗುಣಮಟ್ಟದ ಆಹಾರವನ್ನು ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.
ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ವೈರಸ್ ಆಗಿರುವುದರಿಂದ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಲ್ಲಿ, ಇದನ್ನು ನಿಯಂತ್ರಣ ಮಾಡಬಹುದಾಗಿದೆ. ಸರ್ಕಾರ ಹೊರಡಿಸುವ ಸಲಹೆ, ಸೂಚನೆಗಳನ್ನು ತಪ್ಪದೆ ಪಾಲಿಸಬೇಕಿದ್ದು, ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು. ಅನ್ಬುಕುಮಾರ್ ನೆನಪಿಸಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲೆಯ ಕರಿಕೆ, ಕುಟ್ಟ, ಮಾಕುಟ್ಟಗಳಲ್ಲಿ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಪಶುಪಾಲನಾ ಇಲಾಖೆ ವತಿಯಿಂದ ಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು. ವಿದೇಶದಿಂದ ಬರುವವರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದ್ದು, ಶಂಕಿತರು ಕಂಡುಬಂದಲ್ಲಿ ಜಿಲ್ಲಾಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗುತ್ತದೆ ಅವರು ಮಾಹಿತಿ ನೀಡಿದರು.
ಮನೆಯಲ್ಲಿ ಇರುವವರ ಬಗ್ಗೆ ತಾ.ಪಂ. ಇಒಗಳು, ಗ್ರಾ.ಪಂ.ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ವಿಶೇಷ ಗಮನಹರಿಸಬೇಕು. ಮನೆಯಿಂದ ಹೊರಗೆ ಬಂದಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಪಡೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಭೆಯಲ್ಲಿ ನಿರ್ದೇಶಿಸಿದರು.
ವಿವಿಧ ಭಾಗಗಳಲ್ಲಿ ಕೊರೊನಾ ವೈರಸ್ ಹರಡುತ್ತಿರುವುದರಿಂದ ಕೆಲವು ಮುನ್ನೆಚ್ಚರಿಕೆ ವಹಿಸಬೇಕಿದ್ದು, ಆ ನಿಟ್ಟಿನಲ್ಲಿ ಹೆಚ್ಚಿನ ಜನ ಸೇರುವಲ್ಲಿ ಅಂತರ ಕಾಯ್ದುಕೊಳ್ಳುವುದು, ಸಭೆ ನಡೆಸುವುದನ್ನು ಕಡಿಮೆ ಮಾಡುವುದು, ವೀಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡುವುದು, ಕಚೇರಿಗಳಿಗೆ ಸಾರ್ವಜನಿಕರ ಭೇಟಿ ಕಡಿಮೆ ಮಾಡುವಂತಾಗಲು ಇ-ಮೇಲ್ ಮೂಲಕ ಮಾಹಿತಿ ರವಾನಿಸುವುದು ಮತ್ತು ಸ್ವೀಕರಿಸುವುದು, ಸ್ಥಿರ ದೂರವಾಣಿ ಮೂಲಕ ಮಾಹಿತಿ ಹಂಚಿಕೊಳ್ಳುವುದು, ತುರ್ತು ಕೆಲಸಗಳಿಗೆ ಮಾತ್ರ ಸಾರ್ವಜನಿಕರು ಕಚೇರಿಗಳಿಗೆ ಭೇಟಿ ನೀಡುವಂತಾಗಲು ಸಲಹೆ ಮಾಡುವುದು ಮತ್ತಿತರ ಕಾರ್ಯಗಳು ಆಗಬೇಕಿದೆ ಎಂದರು. ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿನ ಕಚೇರಿಗಳಿಗೆ ಗುಂಪು ಸೇರುವುದು ಕಡಿಮೆ ಮಾಡುವುದು, ಶಿಬಿರಗಳನ್ನು ಆಯೋಜಿಸುವುದನ್ನು ಕಡಿಮೆ ಮಾಡುವುದು, ಮತ್ತಿತರ ಕಾರ್ಯಗಳನ್ನು ಸರ್ಕಾರದ ನಿರ್ದೇಶನದಂತೆ ಕೈಗೊಳ್ಳಬೇಕಿದೆ. ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಘನ ತ್ಯಾಜ್ಯ ವಿಲೇವಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕಿದೆ ಎಂದರು.
ತಾ. 22 ರಂದು ಜಿಲ್ಲೆಗೆ ಸಚಿವರು
ಇಂದಿನ ಸಭೆಯಲ್ಲಿ ಅಧಿಕಾರಿಗಳ ಜೊತೆಯಲ್ಲಿ ಕೊಡಗಿನಲ್ಲಿ ಪ್ರಸ್ತುತ ಸನ್ನಿವೇಶದ ಬಗ್ಗೆ ಸಮಾಲೋಚಿಸಿದ ಉನ್ನತಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ತಾ. 22ರಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಅಲ್ಲದೆ, ಸರಕಾರದ ನಿರ್ದೇಶನಗಳನ್ನು ಆಯಾ ಇಲಾಖೆಗಳ ಕೆಳಹಂತದ ಅಧಿಕಾರಿಗಳು ಚಾಚೂ ತಪ್ಪದೆ ಪಾಲಿಸುವಂತೆ ಸ್ಪಷ್ಟ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾಹಿತಿ ನೀಡಿ ಕೊರೊನಾ ವೈರಸ್ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆಯಲ್ಲಿ 22 ಹಾಸಿಗೆಯ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ತಾಲೂಕು ಆಸ್ಪತ್ರೆಯಲ್ಲಿ 2 ಹಾಸಿಗೆಯ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸಂಬಂಧ ತರಬೇತಿ ನೀಡಲಾಗಿದೆ. ವಿದೇಶಗಳಿಂದ ಬರುವವರ ಬಗ್ಗೆ ಪರಿಶೀಲಿಸಿ ತಪಾಸಣೆ ಮಾಡಿ ಶಂಕೆ ಇದ್ದಲ್ಲಿ ಪ್ರತ್ಯೇಕ ವಾರ್ಡ್‍ಗೆ ಸೇರ್ಪಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ ಅವರು ಶಂಕಿತರಿಗೆ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದರು.
ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ತಮ್ಮಯ್ಯ ಮೈಸೂರು ಮತ್ತು ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ಕಂಡು ಬಂದಿರುವುದರಿಂದ ಕೊಡಗು ಜಿಲ್ಲೆಯಲ್ಲಿಯೂ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀಕ್ಷಕ ಡಾ. ಲೋಕೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ನಾನಾ ಇಲಾಖೆ ಅಧಿಕಾರಿಗಳು ಇತರರು ಇದ್ದರು.
ಸ್ವಚ್ಛತೆಗೆ ಸಲಹೆ
ಈ ನಡುವೆ ನಗರಸಭಾ ಆಯುಕ್ತ ಎಂ.ಎಲ್.ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ಮಡಿಕೇರಿಯ ಜನತೆ ಸ್ವಚ್ಛತೆ ಕಾಪಾಡುವ ಮೂಲಕ ಕೊರೊನಾ ಹರಡದಿರಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.