ಮಡಿಕೇರಿ, ಮಾ. 17: ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾದ ಹಿರಿಯ ಪತ್ರಕರ್ತ, ಸಾಹಿತಿ ಪಾಟೀಲ ಪುಟ್ಟಪ್ಪ (101) ಅವರಿಗೆ ಕೊಡಗು ಪತ್ರಿಕಾ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ವತಿಯಿಂದ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಿರಿಯ ಉಪನ್ಯಾಸಕ ಡಾ. ಶ್ರೀಧರ ಹೆಗಡೆ, ಕೊಡಗು ಪತ್ರಿಕಾ ಭವನದ ಟ್ರಸ್ಟಿ ಟಿ.ಪಿ. ರಮೇಶ್, ಕೊಡಗು ಲೇಖಕ ಮತ್ತು ಕಲಾವಿದರ ಬಳಗದ ಪ್ರಮುಖ ಎಸ್.ಐ. ಮುನೀರ್ ಅಹಮ್ಮದ್, ಸರ್ವೋದಯ ಸಮಿತಿಯ ಪ್ರಮುಖ ಕೆ.ಟಿ. ಬೇಬಿ ಮ್ಯಾಥ್ಯು, ಲೇಖಕ ಮತ್ತು ಕಲಾವಿದರ ಬಳಗದ ಪುದಿಯನೆರವನ ರೇವತಿ ರಮೇಶ್ ಇವರುಗಳು ಪಾಟೀಲ ಪುಟ್ಟಪ್ಪ ಅವರ ಸಾಧನೆ ಕುರಿತು ಮಾತನಾಡಿದರು.

ಸಭೆಯಲ್ಲಿ ಕೊಡಗು ಲೇಖಕ ಮತ್ತು ಕಲಾವಿದರ ಬಳಗದ ಸೋನು ಪ್ರೀತಂ, ಕಡ್ಲೇರ ತುಳಸಿ ಮೋಹನ್, ಸರ್ವೋದಯ ಸಮಿತಿಯ ಪ್ರಮುಖರಾದ ಅಂಬೆಕಲ್ ಕುಶಾಲಪ್ಪ, ಕೋಡಿ ಚಂದ್ರಶೇಖರ್, ಅಂಬೆಕಲ್ ನವೀನ್, ಶೇಖ್ ಅಹಮ್ಮದ್ ಉಪಸ್ಥಿತರಿದ್ದರು. ಪತ್ರಿಕಾ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರೆ, ಬಳಗದ ಪ್ರಧಾನ ಕಾರ್ಯದರ್ಶಿ ವಿಲ್ಫ್ರೆಡ್ ಕ್ರಾಸ್ತಾ ವಂದಿಸಿದರು.

*ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಸಂತಾಪ ಸೂಚಿಸಿದ್ದಾರೆ.

ಕಾಸಪ ಸಂತಾಪ

ಕನ್ನಡದ ಕಟ್ಟಾಳು ಎಂದೇ ಖ್ಯಾತರಾಗಿದ್ದ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಂಬನಿ ಮಿಡಿದಿದೆ.

ಕಸಾಪ ಕಚೇರಿಯಲ್ಲಿಂದು ಸಂತಾಪ ಸಭೆ ಏರ್ಪಡಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಜಿಲ್ಲಾ ನಿರ್ದೇಶಕರುಗಳಾದ ನಾಗರಾಜ ಶೆಟ್ಟಿ, ಉಷಾರಾಣಿ, ಮಡಿಕೇರಿ ತಾಲೂಕು ಗೌರವ ಕಾರ್ಯದರ್ಶಿ ಡಾ. ದಯಾನಂದ, ಧನಂಜಯ್, ರಾಜು, ಮಂಜು, ಕಚೇರಿ ಸಿಬ್ಬಂದಿ ಶ್ವೇತಾ ಇದ್ದರು.