ಭಾಗಮಂಡಲ, ಮಾ. 19: ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪವಿತ್ರ ಪುಣ್ಯಕ್ಷೇತ್ರಗಳಾದ ತಲಕಾವೇರಿ, ಭಾಗಮಂಡಲ, ಶ್ರೀ ಓಂಕಾರೇಶ್ವರ ದೇಗುಲಗಳಲ್ಲಿ ಎಲ್ಲಾ ರೀತಿಯ ಸೇವೆಗಳನ್ನು ತಾ. 20 ರಿಂದ (ಇಂದಿನಿಂದ) ಸ್ಥಗಿತಗೊಳಿಸಲಾಗಿದೆ.ಈ ಮೂರು ಕ್ಷೇತ್ರಗಳಲ್ಲಿ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶವಿರುತ್ತದೆ. ಆದರೆ; ಪೂಜೆ, ತೀರ್ಥಪ್ರಸಾದ ವಿನಿಯೋಗ ಅನ್ನಸಂತರ್ಪಣೆ ಸೇರಿದಂತೆ ಭಾಗಮಂಡಲದಲ್ಲಿ ಪಿಂಡ ಪ್ರದಾನ ಸೇವೆಗಳು ಇರುವದಿಲ್ಲ ಎಂದು ದೇವಾಲಯ ವ್ಯವಸ್ಥಾಪನಾ ಸಮಿತಿ ಪ್ರಕಟಣೆ ತಿಳಿಸಿದೆ.