ಮಡಿಕೇರಿ, ಮಾ. 19 : ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣ ದೃಢ ಪಟ್ಟಿರುವುದರಿಂದ ಮತ್ತಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಶುಕ್ರವಾರದ ಪ್ರಾರ್ಥನೆ ಸಂದರ್ಭ ಮಸೀದಿಗಳಲ್ಲಿ ಮುಸಲ್ಮಾನ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಸ್ವಚ್ಛತೆಗೆ ಆದ್ಯತೆ ನೀಡಲು ಎಲ್ಲಾ ಮಸೀದಿ ಆಡಳಿತ ಮಂಡಳಿಗಳು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಮನವಿ ಮಾಡಿದ್ದಾರೆ.