ಮಡಿಕೇರಿ, ಮಾ. 20 : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗಿನ ಎಲ್ಲಾ ಪೆÇ್ರಟೆಸ್ಟೆಂಟ್ ಚರ್ಚ್ಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ತಾ. 31ರವರಗೆ ಸ್ಥಗಿತಗೊಳಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೆÇ್ರಟೆಸ್ಟೆಂಟ್ ಚರ್ಚ್ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ. ಪಾಸ್ಟರ್ ಫ್ರೆಡ್ಡಿ ತಿಳಿಸಿದ್ದಾರೆ. ಈಗಾಗಲೇ ಕೆಪಿಸಿಎ ಕೊಡಗಿನಲ್ಲಿ 36 ಚರ್ಚ್ಗಳನ್ನು ಒಳಗೊಂಡಿರುತ್ತದೆ. ಈ ಕಾರಣದಿಂದ ಎಲ್ಲಾ ಕ್ರೈಸ್ತ ಭಕ್ತರು ಸಹಕಾರ ನೀಡುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.