ವೀರಾಜಪೇಟೆ, ಮಾ. 20: ಕೇರಳದ ಹುಳಿಕಲ್ನಲ್ಲಿರುವ ಆದಿ ಬೈತೂರು ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ತಾ. 31 ರತನಕ ಪ್ರವೇಶ ಹಾಗೂ ಪೂಜೆ ಪುನಸ್ಕಾರಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ದೇವಾಲಯದ ಮುಖ್ಯ ತಕ್ಕರಾದ ಪುಗ್ಗೇರ ಪೊನ್ನಪ್ಪ ತಿಳಿಸಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊನ್ನಪ್ಪ ದೇವಾಲಯದ ಆಡಳಿತ ಮಂಡಳಿಯ ಪರವಾಗಿ ತಿಳಿಸಿದ್ದಾರೆ.