ಕೂಡಿಗೆ, ಮಾ. 21: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಗ್ರಾಮ ವಿಕಾಸ ಯೋಜನೆ ಅಡಿಯಲ್ಲಿ ಕಸ ವಿಲೇವಾರಿ ಘಟಕ ಪಾರಂಭ ಮಾಡಲು ಸಿದ್ಧವಾಗಿರುವ. ಕೆಲಸವನ್ನು ಸ್ಥಗಿತ ಮಾಡಬೇಕು ಎಂದು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ.
ಗ್ರಾಮ ಪಂಚಾಯಿತಿಗೆ ಸರಕಾರದ ಗ್ರಾಮ ವಿಕಾಸ ಯೋಜನೆಯ ಅಡಿಯಲ್ಲಿ ಒಂದು ಕೋಟಿ ಹಣ ಬಿಡುಗಡೆ ಅಗಿತು ಅದರಲ್ಲಿ ಹತ್ತು ಲಕ್ಷ ರೂಪಾಯಿ ಹಣದಲ್ಲಿ ಕಸ ವಿಲೇವಾರಿ ಘಟಕವನ್ನು ಪಾರಂಭಿಸಲು ಮಾಸಿಕ ಸಭೆಯಲ್ಲಿ ಕ್ರಿಯಾಯೋಜನೆಯನ್ನು ತಯಾರಿಸಿದ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಬ್ಯಾಡಗೊಟ್ಟ ಗ್ರಾಮದಲ್ಲಿ ಪಾರಂಭಿಸಲು ಕ್ರಮ ಕೈಗೊಂಡಿರುವುದು ಸರಿಯಾದ ಕ್ರಮವಲ್ಲ ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬ್ಯಾಡಗೊಟ್ಟ ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ಪಾರಂಭಿಸುವ ಸಮೀಪದಲ್ಲಿ ಪರಿಶಿಷ್ಟ ಜಾತಿ ಕಾಲೋನಿ ಮತ್ತು ದಿಡ್ಡಳ್ಳಿ ಪುನರ್ವಸತಿ ಕೇಂದ್ರ. 354 ಕುಟುಂಬಗಳು ಇವೆ. ಆದರೆ ಈ ಜಾಗದಲ್ಲಿ ಘಟಕ ಪ್ರಾರಂಭ ಮಾಡಬಾರದೆಂದು ದೂರು ನೀಡಿದರೂ ಸಹ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸ್ಪಂದಿಸುತ್ತಿಲ್ಲ. ಈ ಘಟಕವನ್ನು ಪ್ರಾರಂಭಿಸಲು ಮುಂದಾದರೆ ಗ್ರಾಮ ಪಂಚಾಯಿತಿ ಎದುರು ಗ್ರಾಮಸ್ಥರು ಸೇರಿದಂತೆ ದಲಿತ ಹಿತ ರಕ್ಷಣಾ ವೇದಿಕೆಯ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ವೇದಿಕೆಯ ಅಧ್ಯಕ್ಷ ಬಿ.ಡಿ. ಅಣ್ಣಯ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.