ಮಡಿಕೇರಿ, ಮಾ. 21: ಕೊಡಗು ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಒಳಪಟ್ಟಿದ್ದು, ಒತ್ತುವರಿಯಾಗಿರುವ ಕೆರೆಗಳ ಸರ್ವೆ ಕಾರ್ಯ ಕೈಗೊಂಡು ಗಡಿ ಗುರುತಿಸಿ ತೆರವುಗೊಳಿಸು ವದರೊಂದಿಗೆ ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗುವುದು ಎಂದು ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವರಾಗಿರುವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ಈ ಕುರಿತು ಸದಸ್ಯ ಸುನಿಲ್ ಸುಬ್ರಮಣಿ ಅವರು ಕೇಳಿದ್ದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 29 ಕೆರೆಗಳಿವೆ. ಇದರಲ್ಲಿ ಬಾಳಲೆ ಗ್ರಾ.ಪಂ.ನ ಬೆಟ್ಟತ್ತೂರು ಕೆರೆ ಮತ್ತು ಅರುವತೊಕ್ಕಲುವಿನ ಇಗ್ಗುತಪ್ಪ ಕೆರೆಗಳು ಒತ್ತುವರಿಯಾಗಿರುವುದು ಸರಕಾರದ ಗಮನಕ್ಕೆ ಬಂದಿರುವುದಾಗಿ ಸಚಿವರು ತಿಳಿಸಿದ್ದಾರೆ.