ಕೂಡಿಗೆ, ಮಾ. 21: ಹೆಬ್ಬಾಲೆ ಗ್ರಾಮ ಪಂಚಾಯಿತಿ ವತಿಯಿಂದ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಡಳಿತ ಮಂಡಳಿ ಸಭೆ ನೆಡೆಸಿತು. ಗ್ರಾಮ ಪಂಚಾಯತಿ ಅಧ್ಯಕ್ಷೆ ಲತಾ ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮದಲ್ಲಿ ಶುಚಿತ್ವದ ಬಗ್ಗೆ, ಶುದ್ಧವಾದ ಕುಡಿಯುವ ನೀರಿನ ಸರಬರಾಜು ಮಾಡುವ ಬಗ್ಗೆ ಹಾಗೂ ಆರೋಗ್ಯ ಇಲಾಖೆಯವರು ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ತಿಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಚರ್ಚೆ ನಡೆಸಿದರು.

ಪಂಚಾಯತಿ ಉಪಾಧ್ಯಕ್ಷೆ ಸೇರಿದಂತೆ ಸರ್ವ ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ರಾಕೇಶ್ ಹಾಜರಿದ್ದರು.