ಮಡಿಕೇರಿ, ಮಾ.21: ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿರುವುದರಿಂದ ಜಿಲ್ಲೆಯ ಯುವಕ ಸಂಘ, ಯುವತಿ ಮಂಡಳಿ ಹಾಗೂ ಮಹಿಳಾ ಸಮಾಜಗಳು ಎಚ್ಚೆತ್ತುಕೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಗ್ರಾಮೀಣ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಮನವಿ ಮಾಡಿದ್ದಾರೆ.