ಕುಶಾಲನಗರ, ಮಾ. 21: ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರ, ಚಿಕ್ಕಅಳುವಾರ, ಇಲ್ಲಿಗೆ ನೂತನ ಪ್ರಭಾರ ನಿರ್ದೇಶಕರಾಗಿ ಜೀವರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರಾದ ಪ್ರೊ. ಕೆ.ಎಸ್.ಚಂದ್ರಶೇಖರಯ್ಯ ಅವರು ನೇಮಕಗೊಂಡಿದ್ದಾರೆ.

ನಿಕಟಪೂರ್ವ ಪ್ರಭಾರ ನಿರ್ದೇಶಕಿ ಪ್ರೊ. ಮಂಜುಳಾ ಶಾಂತಾರಾಮ್ ಅವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಮಂಗಳೂರು ವಿಶ್ವವಿದ್ಯಾನಿಲಯವು ಉನ್ನತ ಶಿಕ್ಷಣವನ್ನು ಗ್ರಾಮೀಣ ಪ್ರದೇಶದ ಕಟ್ಟಕಡೆಯ ಪ್ರಜೆಗೂ ತಲುಪಬೇಕೆಂಬ ಮಹದಾಸೆಯಿಂದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರವನ್ನು ತೆರೆದು ಹಲವಾರು ಕೋರ್ಸ್‍ಗಳನ್ನು ಪ್ರಾರಂಭಿಸುವ ಮೂಲಕ ಈಗಾಗಲೇ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕನ್ನು ವಿಸ್ತರಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ ಹತ್ತು ಹಲವಾರು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ, ಕೊಡಗು ಜಿಲ್ಲೆಯ ಮತ್ತು ಸುತ್ತಮುತ್ತಲ ಜಿಲ್ಲೆಯ ವಿದ್ಯಾರ್ಥಿಗಳು ನಮ್ಮ ಸಂಸ್ಥೆಗೆ ಹೆಚ್ಚಿನ ವ್ಯಾಸಂಗಕ್ಕೆ ಬರುವಂತೆ ಶ್ರಮಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ. ಚಂದ್ರಶೇಖರ ಗಜಾನನ ಜೋಶಿ, ಪರಿಶಿಷ್ಟÀ ಜಾತಿ ಮತ್ತು ಪರಿಶಿಷ್ಟ ಪಂಗಡ ಕೋಶದ ಸಂಯೋಜಕ ರಾಜ್‍ಕುಮಾರ್‍ಎಸ್. ಮೇಟಿ, ವಿವಿಧ ವಿಭಾಗದ ಉಪನ್ಯಾಸಕರು ಹಾಗೂ ಬೋಧಕೇತರ ವೃಂದ ಉಪಸ್ಥಿತರಿದ್ದರು.