ಮಡಿಕೇರಿ, ಮಾ. 22: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರುಗಳಾದ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹಮದ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿದ ನಿಯೋಗ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರುಗಳನ್ನು ಸನ್ಮಾನಿಸಿ ಗೌರವಿಸಿತು.
ಕಾಂಗ್ರೆಸ್ ಮುಖಂಡರುಗಳಾದ ಹೆಚ್.ಎಸ್.ಚಂದ್ರಮೌಳಿ, ಕೆ.ಪಿ.ಚಂದ್ರಕಲಾ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಂತರಾಮ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಸಾಮಾಜಿಕ ಜಾಲತಾಣದ ಸಂಚಾಲಕ ಸೂರಜ್ ಹೊಸೂರು, ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ತ್ರಿಣೇಶ್, ಉಪಾಧ್ಯಕ್ಷ ರಶೀದ್ ಅಯ್ಯಂಗೇರಿ, ಕೆಪಿಸಿಸಿ ರಾಜ್ಯ ಕಾರ್ಮಿಕ ಘಟಕದ ಕಾರ್ಯದರ್ಶಿ ಅಜ್ಜಳ್ಳಿ ರವಿ, ಮಡಿಕೇರಿ ನಗರ ಎಸ್.ಸಿ. ಘಟಕ ಅಧ್ಯಕ್ಷ ಮುದ್ದುರಾಜ್, ಉಪಾಧ್ಯಕ್ಷ ಜನಾರ್ಧನ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೂವಯ್ಯ, ಮೈಕಲ್ ಮಾರ್ಷಲ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.