ಮಡಿಕೇರಿ, ಮಾ. 24 : ಕೊರೊನಾ ಸೋಂಕು ನಿಯಂತ್ರಣದ ಉದ್ದೇಶದಿಂದ ತಾ. 31 ರ ವರೆಗೆ ರಾಜ್ಯಾದ್ಯಂತ ಲಾಕ್‍ಡೌನ್ ಆದೇಶ ಜಾರಿಯಲ್ಲಿರುವುದರಿಂದ ಅದನ್ನು ಸೂಕ್ಷ್ಮವಾಗಿ ಅನುಷ್ಠಾನಗೊಳಿಸಿ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಮಂಗಳವಾರ ವಿಡಿಯೋ ಕಾನ್ಪರೆನ್ಸ್ ನಡೆಸಿದ ಅವರು ಮಾರಕ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸರ್ಕಾರದ ನಿರ್ದೇಶನದಂತೆ ಕ್ರಮವಹಿಸಬೇಕು ಎಂದು ಹೇಳಿದ್ದಾರೆ.