ಕೂಡಿಗೆ, ಮಾ. 26: ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗುಳಪ್ಪ ಎಂಬವರು ಪೊಲೀಸರಿಂದ ಹಲ್ಲೆಗೊಳಗಾಗಿದ್ದಾರೆ.
ಗುಳಪ್ಪ ಅವರು ನಾಕೂರು ಶಿರಂಗಾಲ ಗ್ರಾ.ಪಂ.ಯಲ್ಲಿ ಕರ್ತವ್ಯ ಮುಗಿಸಿ ತಮ್ಮ ಕಾರಿನಲ್ಲಿ ಮನೆಗೆ ಬರುವ ಸಂದÀರ್ಭ ಕುಶಾಲನಗರ ಸಮೀಪ ಕಾವೇರಿ ನಿಸರ್ಗಧಾಮದ ಬಳಿ ಪೋಲಿಸರು ಕಾರನ್ನು ತಡೆದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಎಂದು ಹೇಳಿದರೂ ಕೂಡ ಲೆಕ್ಕಿಸದೆ ಹಲ್ಲೆ ಮಾಡಿದ್ದಾರೆ ಎಂದು ಗುಳಪ್ಪ ಆರೋಪಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ರವಿಶ್ ಈ ಘಟನೆಯನ್ನು ಖಂಡಿಸಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಮೌಖಿಕವಾಗಿ ದೂರು ನೀಡಿದ್ದಾರೆ.