ಕರಿಕೆ, ಮಾ. 26: ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಕರಿಕೆಯಲ್ಲಿ ಕೊಡಗು ಪೊಲೀಸ್ ಇಲಾಖೆಯಿಂದ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಯಿತು. ಅಲ್ಲದೇ ಪಾಣತ್ತೂರಿಗೆ ಕರಿಕೆ ಕಡೆಯಿಂದ ಸಾರ್ವಜನಿಕರು ತೆರಳದಂತೆ ಗ್ರಾಮ ಪಂಚಾಯತಿ ವತಿಯಿಂದ ಧ್ವನಿವರ್ಧಕದಲ್ಲಿ ಪ್ರಚಾರ ಮಾಡಲಾಯಿತು.