ಮಡಿಕೇರಿ, ಮಾ. 26 : ಕೊರೋೀನಾ ವೈರಸ್ (ಕೋವಿಡ್-19) ಸಂಬಂಧಿಸಿದಂತೆ, ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಳ್ಳಲು ವಿನಾಯಿತಿ ಇದ್ದು ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆ ವರೆಗೆ ಪಡಿತರವನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಜೊತೆಗೆ ಹೊರ ಜಿಲ್ಲೆಯ ಪಡಿತರ ಚೀಟಿದಾರರು ಇದ್ದಲ್ಲಿ, ಅವರಿಗೂ ಸಹ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರ ಧಾನ್ಯ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ಜನರು ಸರತಿ ಸಾಲಿನಲ್ಲಿ ನಿಲ್ಲದೆ ಒಬ್ಬೊಬ್ಬರಾಗಿ ಅಂತರ ಕಾಯ್ದುಕೊಂಡು ಪಡಿತರ ಆಹಾರ ಧಾನ್ಯ ಪಡೆದುಕೊಳ್ಳುವಂತಾಗಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ಕೋರಿದ್ದಾರೆ.