ಮಡಿಕೇರಿ, ಮಾ. 27: ಕೊಡಗಿನ ಗಡಿ ಕೇರಳದ ಚೆಕ್‍ಪೋಸ್ಟ್‍ಗಳ ಮೂಲಕ ಆ ರಾಜ್ಯದ ಮಂದಿ ಸಂಪರ್ಕ ಸಾಧಿಸುವುದರೊಂದಿಗೆ ಕೊರೊನಾ ಹರಡದಂತೆ ಮುಂಜಾಗ್ರತೆ ವಹಿಸುವಂತೆ ಇಲ್ಲಿನ ಜನಪ್ರತಿನಿಧಿಗಳು ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದಾರೆ. ಇಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಸಮ್ಮುಖ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳು ಕೊಡಗಿನ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸ್ಪಷ್ಟ ಸಲಹೆ ನೀಡಿದರು.

ಜಿಲ್ಲೆಗೆ ಹೊಂದಿಕೊಂಡಿರುವ ನೆರೆ ರಾಜ್ಯದ ಕಾಸರಗೋಡು, ಕಣ್ಣೂರು ಮತ್ತು ವಯನಾಡು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ವಿಶೇಷವಾಗಿ ಕಾಸರಗೋಡು ಜಿಲ್ಲೆಯ ಗಡಿ ಭಾಗದ ಹೆದ್ದಾರಿಗಳನ್ನು ಸಂಪೂರ್ಣ ಮುಚ್ಚಲಾಗಿದೆ. ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ, ಸೇರಿದಂತೆ ಸುಮಾರು 13 ಕ್ಕೂ ಹೆಚ್ಚು ಕಡೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ ಎಂದರು.

ಮಾಕುಟ್ಟದಲ್ಲಿ ಎಷ್ಟೇ ನಿರ್ಬಂಧ ಹೇರಿದರೂ ಸಹ ತೊಂದರೆಯಾಗುತ್ತಿದೆ. ರಾಜ್ಯದ ಜನರು ಕೇರಳ ರಾಜ್ಯಕ್ಕೆ ಕೂಲಿ ಮಡಿಕೇರಿ, ಮಾ. 27: ಕೊಡಗಿನ ಗಡಿ ಕೇರಳದ ಚೆಕ್‍ಪೋಸ್ಟ್‍ಗಳ ಮೂಲಕ ಆ ರಾಜ್ಯದ ಮಂದಿ ಸಂಪರ್ಕ ಸಾಧಿಸುವುದರೊಂದಿಗೆ ಕೊರೊನಾ ಹರಡದಂತೆ ಮುಂಜಾಗ್ರತೆ ವಹಿಸುವಂತೆ ಇಲ್ಲಿನ ಜನಪ್ರತಿನಿಧಿಗಳು ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದಾರೆ. ಇಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಸಮ್ಮುಖ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳು ಕೊಡಗಿನ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸ್ಪಷ್ಟ ಸಲಹೆ ನೀಡಿದರು.

ಜಿಲ್ಲೆಗೆ ಹೊಂದಿಕೊಂಡಿರುವ ನೆರೆ ರಾಜ್ಯದ ಕಾಸರಗೋಡು, ಕಣ್ಣೂರು ಮತ್ತು ವಯನಾಡು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ವಿಶೇಷವಾಗಿ ಕಾಸರಗೋಡು ಜಿಲ್ಲೆಯ ಗಡಿ ಭಾಗದ ಹೆದ್ದಾರಿಗಳನ್ನು ಸಂಪೂರ್ಣ ಮುಚ್ಚಲಾಗಿದೆ. ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ, ಸೇರಿದಂತೆ ಸುಮಾರು 13 ಕ್ಕೂ ಹೆಚ್ಚು ಕಡೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ ಎಂದರು.

ಮಾಕುಟ್ಟದಲ್ಲಿ ಎಷ್ಟೇ ನಿರ್ಬಂಧ ಹೇರಿದರೂ ಸಹ ತೊಂದರೆಯಾಗುತ್ತಿದೆ. ರಾಜ್ಯದ ಜನರು ಕೇರಳ ರಾಜ್ಯಕ್ಕೆ ಕೂಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಇನ್ನಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ವಿಧಾನ ಪರಿಷತ್ ಸದಸೆÀ್ಯ ಶಾಂತೆಯಂಡ ವೀಣಾ ಅಚ್ಚಯ್ಯ ಮಾತನಾಡಿ ಕೇರಳ ಗಡಿ ಭಾಗದಲ್ಲಿ ಸಂಪೂರ್ಣ ಬಂದ್ ಮಾಡಬೇಕು. ಸ್ಥಳೀಯವಾಗಿ ಪಿಡಿಒಗಳು ಹೆಚ್ಚಿನ ಕಾರ್ಯ ನಿರ್ವಹಿಸುತ್ತಿದ್ದು ಅವರಿಗೆ ಪಾಸ್ ಸೇರಿದಂತೆ ಅಗತ್ಯ ರಕ್ಷಣೆ ನೀಡಬೇಕು ಎಂದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ.ಹರೀಶ್ ಅವರು ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಎಚ್ಚರಿಕೆ ವಹಿಸಬೇಕೆಂದು ಸಲಹೆ ಮಾಡಿದರು.

ಜಿ.ಪಂ.ಉಪಾಧ್ಯಕೆÀ್ಷ ಲೋಕೇಶ್ವರಿ ಗೋಪಾಲ್ ಅವರು. ಜಿಲ್ಲೆಯ ದಿನಸಿ ಅಂಗಡಿಗಳಲ್ಲಿ ಆಹಾರ ಪದಾರ್ಥ ದೊರೆಯುತ್ತಿಲ್ಲ ಎಂಬ ಮಾಹಿತಿಯಿದೆ. ಆ ನಿಟ್ಟಿನಲ್ಲಿ ಅಗತ್ಯ ವಸ್ತುಗಳು ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಮೈಸೂರಿನ ಆರ್‍ಎಂಸಿ ಯಾರ್ಡ್‍ನಿಂದ ದಿನಸಿ ಪದಾರ್ಥಗಳು ಕೊಡಗಿಗೆ ಬರುತ್ತಿಲ್ಲ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರುವಂತೆ ಕೆ.ಜಿ.ಬೋಪಯ್ಯ ಸಲಹೆ ಮಾಡಿದರು. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ಮಾತನಾಡಿ ಏಪ್ರಿಲ್ ತಿಂಗಳ ಪಡಿತರ ನಾಳೆ ಅಥವಾ ನಾಳಿದ್ದು ಬರಲಿದ್ದು, 5 ಕೆಜಿ ಅಕ್ಕಿ ಮತ್ತು 2 ಕೆಜಿ ಗೋಧಿ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳಲಾಯಿತು. ಕೇರಳ ಗಡಿ ಭಾಗದಲ್ಲಿ ಸಂಪೂರ್ಣ ಬಂದ್ ಮಾಡುವುದು ಹಾಗೂ ಕೊರೊನಾ ವೈರಸ್ ಸಂಬಂಧಿಸಿದಂತೆ ಇನ್ನಷ್ಟು ಮುನ್ನೆಚ್ಚರಿಕೆ ವಹಿಸುವುದು. ಸುಳ್ಯ ವೈದ್ಯಕೀಯ ಕಾಲೇಜಿನ ವೈದ್ಯರನ್ನು ನಿಯೋಜಿಸುವಂತೆ ನಿರ್ಣಯಿಸ ಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಿ., ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ಕಾಲೇಜಿನ ಡೀನ್ ಡಾ.ಕಾರ್ಯಪ್ಪ, ಅಧೀಕ್ಷಕ ಡಾ.ಲೋಕೇಶ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ವಿಶಾಲ್, ಸಮುದಾಯ ಆರೋಗ್ಯ ವಿಭಾಗದ ರಾಮಚಂದ್ರ ಕಾಮತ್, ಪ್ರಕೃತಿ ವಿಕೋಪ ಸಮನ್ವಯಾಧಿಕಾರಿ ಅನನ್ಯ ವಾಸುದೇವ್ ಇತರರು ಇದ್ದರು.