ಕಡಂಗ, ಮಾ. 27: ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆ ಜಿಲ್ಲಾಧಿಕಾರಿಗಳ ಆದೇಶದಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಚೆಯ್ಯಂಡಾಣೆ, ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲೂ ಧ್ವನಿವರ್ಧಕಗಳ ಮೂಲಕ ಅರಿವು ಮೂಡಿಸಲಾಯಿತು. ಜನರು ಸರ್ಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲ ರೀತಿಯಲ್ಲೂ ಪಂಚಾಯಿತಿ ಜೊತೆ ಸಹಕರಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿನೇಶ್ ತಿಳಿಸಿದ್ದಾರೆ.