ಮಡಿಕೇರಿ, ಮಾ. 27: ಇಂದು ಇಡೀ ಮನುಕುಲಕ್ಕೆ ಮಾರಕ ರೋಗವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಎಂಬ ಸಾಂಕ್ರಾಮಿಕ ರೋಗವು ಹೆಮ್ಮಾರಿಯ ರೂಪದಲ್ಲಿ ಇಡೀ ಪ್ರಪಂಚವನ್ನೇ ಆವರಿಸಿದೆ. ಅದರಲ್ಲೂ ಕೊಡಗಿನಲ್ಲಿ ಈ ವೈರಸ್ ಸೋಂಕು ನಿಧಾನವಾಗಿ ಹರಡುತ್ತಿದ್ದು, ಈಗಾಗಲೇ ಹಲವು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ಆಡಳಿತ ಕೈಗೊಂಡಿರುವ ಕ್ರಮಗಳನ್ನು ನಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ಬೆಂಬಲಿಸಬೇಕಾಗಿದೆ. ಸರ್ಕಾರವೂ ದೇಶಾದ್ಯಂತ ಲಾಕ್ಡೌನ್ ಘೋಷಿಸಿದೆ. ಜನಸಾಮಾನ್ಯರು ಮನೆಯಲ್ಲಿಯೇ ಇದ್ದು, ಮುಂದಿನ ಆದೇಶದವರೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೊನಾ ಇನ್ನಷ್ಟು ಹರಡದಂತೆ ಜಾಗೃತರಾಗಬೇಕಾಗಿದೆ. ಮನೆಯಿಂದ ಹೊರಗೆ ಬಾರದೆ ಕೊರೊನಾ ವೈರಸ್ ವಿರುದ್ಧ ಹೋರಾಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.