ನಾಪೆÇೀಕ್ಲು, ಮಾ. 27: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಪೆÇಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ನಾಪೆÇೀಕ್ಲುವಿಗೆ ಭೇಟಿ ನೀಡಿ ಕೊರೊನಾ ವೈರಸ್ ತಡೆಗೆ ಸ್ಥಳೀಯ ಗ್ರಾಮ ಪಂಚಾಯಿತಿ ತೆಗೆದುಕೊಂಡ ಕ್ರಮಗಳ ಬಗ್ಗೆ ಖುದ್ದು ಪರಿಶೀಲಿಸಿದರು. ಪೆÇಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್, ತಹಶೀಲ್ದಾರ್ ಮಹೇಶ್, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀ ಮತ್ತಿತರ ಅಧಿಕಾರಿಗಳೊಂದಿಗೆ ನಾಪೆÇೀಕ್ಲು ಮಾರುಕಟ್ಟೆಯಿಂದ ಪಟ್ಟಣದವರೆಗೆ ಕಾಲ್ನಡಿಗೆಯಲ್ಲಿ ಸಂಚರಿಸಿದ ಅವರು ನಂತರ ಬೇತು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ವಿತರಣೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಗ್ರಾಮ ಲೆಕ್ಕಿಗರಾದ ಜನಾರ್ಧನ್, ಅಮೃತಾ, ಮತ್ತಿತರರು ಇದ್ದರು.
ಜನಸಂಚಾರ ವಿರಳ: ಲಾಕ್‍ಡೌನ್ ಕಾರಣದಿಂದ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಗಿಂತ ಇಂದು ಪಟ್ಟಣದಲ್ಲಿ ಸಾರ್ವಜನಿಕರ ಸಂಖ್ಯೆ ಕಡಿಮೆಯಿತ್ತು. ಬಹುತೇಕ ಜನರು ಸಾಮಾಜಿಕ ಅಂತರದಲ್ಲಿ ದಿನಸಿ ಮತ್ತು ತರಕಾರಿಗಳನ್ನು ಖರೀದಿಸುತ್ತಿರುವದು ಕಂಡು ಬಂತು. ಆದರೆ ಹಲವು ದಿನಸಿ ಸಾಮಗ್ರಿಗಳು ಅಂಗಡಿಗಳಲ್ಲಿ ಖಾಲಿಯಾಗಿರುವ ಕಾರಣ ಬೇರೆ, ಬೇರೆ ಅಂಗಡಿಗಳಿಗೆ ತೆರಳಿ ವಿಚಾರಿಸುತ್ತಿರುವ ದೃಶ್ಯ ಕಂಡುಬಂತು. ಪೆÇಲೀಸರು 12 ಗಂಟೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಸಾರ್ವಜನಿಕರನ್ನು ಮನೆಗೆ ತೆರಳುವಂತೆ ಸೂಚಿಸಿದರು.