ಕೂಡಿಗೆ, ಮಾ. 29: ದಿಡ್ಡಳಿ ನಿರಾಶ್ರಿತರಿಗೆ ಬ್ಯಾಡಗೊಟ್ಟ ಗ್ರಾಮದಲ್ಲಿ ವಸತಿ ಸೌಲಭ್ಯಕ್ಕಾಗಿ ಹೋರಾಟ ಮಾಡಿದ್ದ ಮಲ್ಲಪ್ಪ ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದ ಮಲ್ಲಪ್ಪ (65) ಕಳೆದ 4 ತಿಂಗಳುಗಳಿಂದ ಅನಾರೋಗ್ಯಕ್ಕೊಳಗಾಗಿದ್ದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜರಾವ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತರು ಪತ್ನಿ, ಓರ್ವ ಪುತ್ರ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.