ಕೂಡಿಗೆ, ಮಾ. 28: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿ ಗ್ರಾಮಕ್ಕೆ ಬೇರೆ ಕಡೆಯಿಂದ ಅನೇಕ ಜನರು ಬರುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ರಸ್ತೆಗೆ ಅಡ್ಡಲಾಗಿ ಬೇಲಿ ಹಾಕಲಾಗಿತ್ತು.

ಈ ಗ್ರಾಮಕ್ಕೆ ಅನೇಕ ಯುವಕರು ಅನಧಿಕೃತವಾಗಿ ಬಂದು ಬೇರೆ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ ಎಂದು ಗ್ರಾಮಸ್ಥರು ತಾತ್ಕಾಲಿಕ ಬೇಲಿ ನಿರ್ಮಾಣ ಮಾಡಿದ್ದರು. ಆದರೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನಂದೀಶ್ ಅವರ ತಂಡದವರು ಸ್ಥಳಕ್ಕೆ ಭೇಟಿ ನೀಡಿ ಬೇಲಿ ತೆರವುಗೊಳಿಸಿದರು. ಗ್ರಾಮಕ್ಕೆ ಬರುವ ಮತ್ತು ಹೋಗುವ ಜನರ ಮೇಲೆ ನಿಗಾ ಇಡಲಾಗಿದೆ ಎಂದು ಅವರು ತಿಳಿಸಿದ್ದಾರೆ.