ಗೋಣಿಕೊಪ್ಪಲು, ಮಾ. 29: ದೇಶದೆಲ್ಲೆಡೆ ಮಹಾಮಾರಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೋರಾಟ ನಡೆಸುತ್ತಿವೆÉ. ಈ ಹೋರಾಟಕ್ಕೆ ಸಹಾಯವಾಗುವಂತೆ ಮೈಸೂರು ರಂಗಾಯಣದ ಕಲಾವಿದರು, ನಿರ್ದೇಶಕರು ಹಾಗೂ ಸಿಬ್ಬಂದಿಯ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ರೂಪದಲ್ಲಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.