ಕೂಡಿಗೆ, ಮಾ. 28: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ಮತ್ತು ಎರಡನೇ ವಾರ್ಡ್ ಜನರು ಕುಡಿಯುವ ನೀರಿಗಾಗಿ ಪರದಾಡುವ ಪ್ರಸಂಗ ಎದುರಾಗಿದೆ.
ಈ ವ್ಯಾಪ್ತಿಯ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಕೊಳವೆ ಬಾವಿಗಳಿಂದ ನೀರನ್ನು ಸರಬರಾಜು ಮಾಡಲಾಗುತ್ತಿತ್ತು. ಆದರೆ ಕಳೆದ 5 ದಿನಗಳಿಂದ ಈ ಕೊಳವೆ ಬಾವಿಯಿಂದ ನೀರು ಬರುತ್ತಿಲ್ಲ. ಕೊಳವೆ ಬಾವಿ ಬತ್ತಿಹೋಗಿವೆ. ನೀರಿಗಾಗಿ ಪರದಾಡುವ ಪ್ರಸಂಗ ಎದುರಾಗಿದೆ. ಸಂಬಂಧಿಸಿದ ಜಿಲ್ಲಾ ಪಂಚಾಯಿತಿ ಸದಸ್ಯರು ಹೆಚ್ಚು ಗಮನ ಹರಿಸಿ ಬದಲಿ ಕೊಳವೆ ಬಾವಿಯನ್ನು ಕೊರೆಸಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.