ಕೂಡಿಗೆ, ಏ. 1: ಕೂಡಿಗೆ ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲಾ ಗ್ರಾಮಗಳಿಗೆ ಕೊರೊನಾ ವೈರಸ್ ಹಿನ್ನೆಲೆ ಬಿರುಸಿನ ಪ್ರಚಾರದ ಮೂಲಕ ಕಟ್ಟುನಿಟ್ಟಾದ ನಿಯಮಗಳನ್ನು ಪಾಲಿಸುವಂತೆ ಮೈಕ್ ಮೂಲಕ ಆಟೋದಲ್ಲಿ ಪ್ರಚಾರ ಮಾಡಲಾಗುತ್ತಿದೆ.

ಕೂಡಿಗೆ ವ್ಯಾಪ್ತಿಯ ಗ್ರಾಮಗಳಿಗೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಬಂದು ಮನೆಯಲ್ಲಿರುವವರು ಸ್ಥಳೀಯ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳವಂತೆ ಸೂಚನೆ ನೀಡಿದ್ದಾರೆ.

ಅಲ್ಲದೆ ಗ್ರಾಮಸ್ಥರು ಮನಬಂದಂತೆ ಮನೆಯಿಂದ ಹೊರಬರದಂತೆ ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿಲ್ಪಾ ಹಾಗೂ ಸಿಬ್ಬಂದಿ ವರ್ಗದವರು ಆಯಾ ಗ್ರಾಮಗಳಲ್ಲಿ ಔಷಧಿಗಳ ಸಿಂಪಡಿಸುವಿಕೆ ಮತ್ತು ಚರಂಡಿಗಳ ಶುಚಿತ್ವದ ಕಡೆಗೆ ಹೆಚ್ಚಿನ ಗಮನ ನೀಡುವಂತೆ ತಿಳಿಸಿದ್ದಾರೆ.

ಈ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಮನೆಯಿಂದ ಹೊರಬರದಂತೆ ಆರೋಗ್ಯ ಇಲಾಖೆಯವರು ಸೂಚನೆ ನೀಡಿದ್ದಾರೆ.