ಸುಂಟಿಕೊಪ್ಪ, ಮಾ. 31: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳ, ಸಿಬ್ಬಂದಿಗಳ ಕೊರತೆ ಕಾಡುತ್ತಿದ್ದು ರೋಗಿಗಳ ದಿನನಿತ್ಯ ಚಿಕಿತ್ಸೆಗೆ ತೊಡಕು ಉಂಟಾಗುತ್ತಿದೆ. ಈ ಬಗ್ಗೆ ಗ್ರಾ.ಪಂ., ತಾ.ಪಂ. ಆಸ್ಪತ್ರೆ ರಕ್ಷಾ ಸಮಿತಿ ವತಿಯಿಂದ ನಿಯೋಗ ತೆರಳಿ ಡಿಹೆಚ್‍ಓ ಗೆ ಮನವಿ ಸಲ್ಲಿಸಿದ್ದಾರೆ.

ಸುಂಟಿಕೊಪ್ಪ ಕೇಂದ್ರದ ಆಂಬ್ಯುಲೆನ್ಸ್ ಚಾಲಕನ ಮೇಲೆ ಹಲವಾರು ಬಾರಿ ಸಾರ್ವಜನಿಕರು ದೂರು ಸಲ್ಲಿಸಿ ವರ್ಗಾವಣೆಗೆ ಆಗ್ರಹಿಸಿದ್ದರೂ ಜಿಲ್ಲಾ ಆರೋಗ್ಯ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಟೀಕಿಸಿದ್ದಾರೆ. ಗ್ರಾಮ ಪಂಚಾಯಿತಿಯಿಂದಲ್ಲೂ ಸಹ ಚಾಲಕನ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.