ಕೂಡಿಗೆ, ಏ.2: ಕೂಡಿಗೆ ಗ್ರಾ.ಪಂ.ವ್ಯಾಪ್ತಿಯ ಹುದುಗೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆಯಾ ವ್ಯಾಪ್ತಿಗೆ ಸೇರಿದ ಎಲ್ಲಾ ಮಕ್ಕಳ ಮನೆಗಳಿಗೆ ಮತ್ತು ಗರ್ಭಿಣಿ ಮಹಿಳೆಯ ರಿಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಈ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಅಲ್ಲಿನ ಕಾರ್ಯಕರ್ತೆಯರು ವಿತರಣೆ ಮಾಡಿದರು.