ಮಡಿಕೇರಿ, ಏ. 2: ಕೊರೊನಾ ಸಂಬಂಧ ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆ ಹಚ್ಟಿ ತಪಾಸಣೆ ಮಾಡುವ ಕಾರ್ಯವನ್ನು ಮುಂದುವರೆಸಲಾಗಿದೆ. ಅದರಂತೆ ಇಂದು ಸಂಜೆಯವರೆಗೆ ಮಡಿಕೇರಿ ತಾಲೂಕಿನಲ್ಲಿ 180, ವೀರಾಜಪೇಟೆ ತಾಲೂಕಿನಲ್ಲಿ 157 ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 124 ಜನರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 388 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆಯನ್ನು ಮಾಡಲಾಗಿದೆ.
ಇಲ್ಲಿಯವರೆಗೆ ಒಟ್ಟು 51 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 1 ಪ್ರಕರಣ ದೃಢಪಟ್ಟಿದ್ದು, 45 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿರುತ್ತದೆ. 5 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ ಸೋಂಕು ದೃಢಪಟ್ಟ 1 ಪ್ರಕರಣ ಮತ್ತು 5 ಸೋಂಕು ಶಂಕಿತ ಪ್ರಕರಣಗಳು ಸೇರಿದಂತೆ ಒಟ್ಟು 6 ಪ್ರಕರಣಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ.