ಕುಶಾಲನಗರ, ಏ. 2: ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಕುಶಾಲನಗರ ಗಡಿಭಾಗದ ಪೊಲೀಸ್ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ಪೊಲೀಸರು ಮತ್ತು ಇತರ ಇಲಾಖೆ ಸಿಬ್ಬಂದಿಗಳ ಕ್ಷೇಮ ಸಮಾಚಾರ ವಿಚಾರಿಸಿದರು. ಕೇಂದ್ರದಲ್ಲಿ ದಿನನಿತ್ಯದ ಚಟುವಟಿಕೆಗಳ ಬಗ್ಗೆ ಸ್ಥಳೀಯ ಸಿಬ್ಬಂದಿಗಳೊಂದಿಗೆ ಚರ್ಚಿಸಿದ ಶಾಸಕರು, ಕೊರೊನಾದಿಂದ ಸಾರ್ವಜನಿಕರ ರಕ್ಷಣೆಗಾಗಿ ಹಗಲಿರುಳು ದುಡಿಯುತ್ತಿರುವ ಅಗತ್ಯ ಸೇವೆಗಳ ಅಧಿಕಾರಿ, ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಡಿವೈಎಸ್ಪಿ ಶೈಲೇಂದ್ರ ಕುಮಾರ್, ವೃತ್ತ ನಿರೀಕ್ಷಕ ಮಹೇಶ್, ಸಂಚಾರಿ ಠಾಣಾಧಿಕಾರಿ ಅಚ್ಚಮ್ಮ ಅವರುಗಳೊಂದಿಗೆ ಕುಶಾಲನಗರ ಮತ್ತು ಸುತ್ತಮುತ್ತಲಿನ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸಿದರು.