ಕುಶಾಲನಗರ, ಏ. 2: ಹೆಬ್ಬಾಲೆ ಗ್ರಾಮದಲ್ಲಿ ಲಾಕ್‍ಡೌನ್ ಆದೇಶ ಉಲ್ಲಂಘಿಸಿ ವ್ಯಾಪಾರ ವಹಿವಾಟು ಮಾಡುತ್ತಿದ್ದ ವ್ಯಾಪಾರಿಯೊಬ್ಬನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡು ಕ್ರಮಕೈಗೊಂಡಿದ್ದಾರೆ.

ಹೆಬ್ಬಾಲೆ ಮುಖ್ಯರಸ್ತೆ ಬದಿಯಲ್ಲಿರುವ ಇಲೆಕ್ಟ್ರಿಕಲ್ ಮತ್ತು ಹಾರ್ಡ್‍ವೇರ್ ಅಂಗಡಿಯಲ್ಲಿ ಎದುರುಗಡೆಯಿಂದ ಬಾಗಿಲು ಹಾಕಿ ಹಿಂಬದಿ ಬಾಗಿಲು ಮೂಲಕ ವ್ಯಾಪಾರ ವಹಿವಾಟು ಮಾಡುತ್ತಿರುವ ಬಗ್ಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ಮತ್ತು ಗ್ರಾಮಾಂತರ ಠಾಣಾಧಿಕಾರಿ ನಂದೀಶ್ ನೇತೃತ್ವದ ತಂಡ ದಾಳಿ ಮಾಡಿ ಅಂಗಡಿಯನ್ನು ಬಂದ್ ಮಾಡುವುದರೊಂದಿಗೆ ಅಂಗಡಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ 10 ದಿನದಿಂದ ನಿತ್ಯ ಈತ ವ್ಯಾಪಾರ ಮಾಡುತ್ತಿದ್ದ ಬಗ್ಗೆ ಸ್ಥಳೀಯರು ದೂರಿದ್ದರು.