ಸೋಮವಾರಪೇಟೆ, ಏ. 2: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ.ಪಂ. ವತಿಯಿಂದ ಕೀಟನಾಶಕವನ್ನು ಸಿಂಪಡಿಸಲಾಯಿತು. ಪಟ್ಟಣದ ಚರಂಡಿಗಳು, ಜನನಿಬಿಡ ಪ್ರದೇಶಗಳು, ಅಂಗಡಿ ಮುಂಗಟ್ಟುಗಳ ಎದುರು ಭಾಗದಲ್ಲಿ ಪಂಚಾಯಿತಿ ಸಿಬ್ಬಂದಿಗಳು ಕೀಟನಾಶಕವನ್ನು ಸಿಂಪಡಿಸಿದರು. ಕೊರೊನಾ ಸೋಂಕು ಹಿನ್ನೆಲೆ ಲಾಕ್‍ಡೌನ್ ಆದೇಶ ಚಾಲ್ತಿಯಲ್ಲಿರುವದರಿಂದ ನಿಗದಿತ ದಿನಗಳಂದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಟ್ಟಣಕ್ಕೆ ಆಗಮಿಸುತ್ತಿದ್ದು, ಕ್ರಿಮಿಕೀಟಗಳಿಂದ ಸಾಂಕ್ರಾಮಿಕ ಖಾಯಿಲೆಗಳು ಹರಡದಂತೆ ಪಂಚಾಯಿತಿ ಮುಂಜಾಗ್ರತೆ ವಹಿಸಿದ್ದು, ಪಟ್ಟಣದ ಆಯ್ದ ಪ್ರದೇಶದಲ್ಲಿ ಕೀಟನಾಶಕ ಸಿಂಪಡಿಸಲಾಯಿತು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ್, ಸದಸ್ಯರಾದ ಬಿ.ಆರ್. ಮಹೇಶ್, ಪಿ.ಕೆ. ಚಂದ್ರು ಅವರುಗಳು ಈ ಸಂದರ್ಭ ಉಪಸ್ಥಿತರಿದ್ದರು.