ಮಡಿಕೇರಿ, ಏ. 2 : ಕೋವಿಡ್-19 ರ ಸಂಬಂಧ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಕಂಟಿಜೆನ್ಸಿ ಯೋಜನೆ ಯನ್ನು ತಯಾರಿ ಸಲಾಗಿದ್ದು, ಅದರಂತೆ ಜಿಲ್ಲೆಯಲ್ಲಿ 13 ಫೀವರ್ ಕ್ಲಿನಿಕ್, 13 ಕ್ವಾರಂಟೈನ್ ಸೆಂಟರ್ ಮತ್ತು 3 ಸೂಪರ್ವೈಸ್ಡ್ ಐಸೋಲೇಶನ್ ಸೆಂಟರ್ ಆರಂಭಿಸಲು ಉದ್ದೇಶಿಸಲಾಗಿದೆ. ಅದರಂತೆ ಮೊದಲ ಹಂತದಲ್ಲಿ ಜಿಲ್ಲೆಯಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಬೋಧನಾ ಆಸ್ಪತ್ರೆ (ಜಿಲ್ಲಾ ಆಸ್ಪತ್ರೆ, ಮಡಿಕೇರಿ). ಸಾರ್ವಜನಿಕ ಆಸ್ಪತ್ರೆ ಸೋಮವಾರಪೇಟೆ, ಸಮುದಾಯ ಆರೋಗ್ಯ ಕೇಂದ್ರ ಕುಶಾಲನಗರ, ಸಾರ್ವಜನಿಕ ಆಸ್ಪತ್ರೆ ವೀರಾಜಪೇಟೆಯಲ್ಲಿ 4 ಫೀವರ್ ಕ್ಲಿನಿಕ್‍ಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.