ಮಡಿಕೇರಿ, ಏ. 2 : ಕೊರೊನಾ ವೈರಸ್‍ನ ಸೋಂಕು ಹರಡದಂತೆ ಸರಕಾರ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಕ್ರಮದ ಒಂದು ಭಾಗವಾಗಿ ಬ್ಯಾಂಕ್‍ಗಳು ಕೂಡ ಸೀಮಿತ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದವು. ಇದೀಗ ರಾಜ್ಯ ಮಟ್ಟದ ಬ್ಯಾಂಕರ್‍ಗಳ ಸಮಿತಿಯು ಸಭೆ ಸೇರಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಸಮಯವನ್ನು ಈ ಮೊದಲಿನಂತೆ ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ಕಾರ್ಯರೂಪಕ್ಕೆ ತರಲಾಗಿದೆ ಎಂದು ಕೊಡಗು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‍ನ ಮುಖ್ಯ ವ್ಯವಸ್ಥಾಪಕ ಆರ್.ಕೆ. ಬಾಲಚಂದ್ರ ತಿಳಿಸಿದ್ದಾರೆ.ಮಡಿಕೇರಿ, ಏ. 2 : ಕೊರೊನಾ ವೈರಸ್‍ನ ಸೋಂಕು ಹರಡದಂತೆ ಸರಕಾರ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಕ್ರಮದ ಒಂದು ಭಾಗವಾಗಿ ಬ್ಯಾಂಕ್‍ಗಳು ಕೂಡ ಸೀಮಿತ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದವು. ಇದೀಗ ರಾಜ್ಯ ಮಟ್ಟದ ಬ್ಯಾಂಕರ್‍ಗಳ ಸಮಿತಿಯು ಸಭೆ ಸೇರಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಸಮಯವನ್ನು ಈ ಮೊದಲಿನಂತೆ ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ಕಾರ್ಯರೂಪಕ್ಕೆ ತರಲಾಗಿದೆ ಎಂದು ಕೊಡಗು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‍ನ ಮುಖ್ಯ ವ್ಯವಸ್ಥಾಪಕ ಆರ್.ಕೆ. ಬಾಲಚಂದ್ರ ತಿಳಿಸಿದ್ದಾರೆ.