ಕೂಡಿಗೆ, ಏ. 3: ಅರಣ್ಯ ಇಲಾಖೆಯ ನಿರ್ಲಕ್ಷ್ಯ ಮನೋಭಾವ ಮಾಡದೆ ಗ್ರಾಮಸ್ಥರ ಸಹಕಾರ ಪಡೆದು ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಾಗ ಬೇರೆ ಭಾಗಗಳಿಗೆ ಹಾರಡದಂತೆ ನಂದಿಸುವಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅರಣ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ಯನ್ನು ಶಾಸಕ ಅಪ್ಪಚ್ಚು ರಂಜನ್ ನೀಡಿದ್ದಾರೆ.
ಅರಣ್ಯ ಇಲಾಖೆಯವರು ಬೆಂಕಿಯ ಮುಂಜಾಗ್ರತಾ ಕ್ರಮಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು; ಆಯಾ ವ್ಯಾಪ್ತಿಯ ಅರಣ್ಯ ವೀಕ್ಷಣೆ ಸಿಬ್ಬಂದಿಗಳನ್ನು ಅವರುಗಳ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಬೇಕು. ಆಕಸ್ಮಿಕವಾಗಿ ಬೆಂಕಿ ಬಿದ್ದ ಸಂದರ್ಭದಲ್ಲಿ ಸ್ಥಳೀಯರ ಸಹಕಾರ ಪಡೆಯಬೇಕು.
ಅರಣ್ಯ ಅಧಿಕಾರಿಗಳು ಮನಬಂದಂತೆ ಕಾರ್ಯನಿರ್ವಹಿಸುವ ಬದಲು ಅರಣ್ಯಕ್ಕೆ ಬೆಂಕಿ ಬೀಳದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅರಣ್ಯ ರಕ್ಷಣೆಗೆ ತೋಡಗಬೇಕು ಎಂದರು.