ಕರಿಕೆ, ಏ. 3: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದಲ್ಲಿ ವೈರಸ್ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಅಭಿವೃದ್ಧಿ ಅಧಿಕಾರಿ ಬಿಪಿನ್ ತಮ್ಮ ಸಿಬ್ಬಂದಿಗಳೊಂದಿಗೆ ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದು, ಕೇರಳಕ್ಕೆ ಕರಿಕೆಯಿಂದ ಯಾರೂ ತೆರಳದಂತೆ ಮನವಿ ಮಾಡುತ್ತಿದ್ದಾರೆ. ರೋಗದ ಲಕ್ಷಣಗಳು ಕಂಡುಬಂದಲ್ಲಿ ಸಮೀಪದ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಕೊಳ್ಳುವಂತೆಯೂ, ವಿದೇಶದಿಂದ ಯಾರಾದರೂ ವ್ಯಕ್ತಿಗಳು ಬಂದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.