ವೀರಾಜಪೇಟೆ, ಏ.3: ಮೊಟ್ಟ ಮೊದಲ ಬಾರಿಗೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತು ಬದ್ಧ ಜಾಮೀನಿಗೆ ಆದೇಶ ಲಭಿಸಿದೆ.
ತಾ. 21.4.2019ರಂದು ಬೆಂಗಳೂರಿನ ಆರ್.ಟಿ.ನಗರದ ವಿಘ್ನೇಶ್ ಎಂಬವರ ಕೊಲೆ ಪ್ರಕರಣದಲ್ಲಿ ಪೊಲೀಸರು ಕೊಡಗಿನ ಎಂ.ಸಿ.ಸೋಮಯ್ಯ ಎಂಬವರನ್ನು ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರಿಸಿದ್ದರು. ವಕೀಲ ಎನ್.ರವೀಂದ್ರನಾಥ್ ಕಾಮತ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಾ. 31.3.20 ರಂದು ವೀಡಿಯೋ ಕಾನ್ಪರೆನ್ಸ್ನಲ್ಲಿ ಬೆಳಿಗ್ಗೆ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಾನ್ ಮೈಕಲ್ಸನ್ ಅವರು ಷರತ್ತು ಬದ್ಧ ಜಾಮೀನು ನೀಡಿದ್ದಾರೆ.