ಸೋಮವಾರಪೇಟೆ,ಮಾ.3: ಕೊರೊನಾ ವೈರಸ್‍ಗೆ ತಡೆಯೊಡ್ಡುವ ಉದ್ದೇಶದಿಂದ ಲಾಕ್‍ಡೌನ್ ಘೋಷಣೆಯಾಗಿರುವ ಪ್ರಸ್ತುತತೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಶುಕ್ರವಾರ ಬೆಳಿಗ್ಗೆ 8 ರಿಂದ 12 ಗಂಟೆವರೆಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ದಿನಸಿ ಖರೀದಿಗೆ ನೂಕು ನುಗ್ಗಲು ಇರಲಿಲ್ಲ. ಪಟ್ಟಣದ ಹೊರವಲಯದಲ್ಲಿರುವ ಎಪಿಎಂಸಿ ಆವರಣದಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರಿಂದ ಪಟ್ಟಣದೊಳಗೆ ಜನಸಂದಣಿ ಇರಲಿಲ್ಲ.