ಕೂಡಿಗೆ, ಏ. 4: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಇವರೆಗೆ 250ಕ್ಕೂ ಹೆಚ್ಚು ಜನರನ್ನು ಕೊರೊನಾ ವೈರಸ್ ಹಿನ್ನೆಲೆ ಕ್ವಾರಂಟೈನ್ನಲ್ಲಿ ಇರಿಸಿರುವ ವಿಚಾರ ತಿಳಿದುಬಂದಿದೆ.
ಶಿರಂಗಾಲ ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರವು ಕುಶಾಲನಗರ, ಮುಳ್ಳುಸೋಗೆ, ಕೂಡುಮಂಗಳೂರು, ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಹದ್ದಿನ ಭಾಗಕ್ಕೆ ಒಳಗೊಂಡಿದೆ.
ಈ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಉಪ ಗ್ರಾಮಗಳು ಬರುತ್ತವೆ. ಈ ಗ್ರಾಮಗಳಿಗೆ ಮಾಹಿತಿಗಾಗಿ ಆಶಾ ಕಾರ್ಯಕರ್ತೆರು ಸೇರಿದಂತೆ ಅರೋಗ್ಯ ಇಲಾಖೆಯ ಹಿರಿಯ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರು, ಗ್ರಾಮದ ಮನೆ ಮನೆ ವೀಕ್ಷಣೆಯನ್ನು ನಿರ್ವಹಿಸುತ್ತಿದ್ದಾರೆ.
ಈ ಮಾಹಿತಿ ಪ್ರಕಾರ ಕುಶಾಲನಗರ, ಮುಳ್ಳುಸೋಗೆ, ಕೂಡುಮಂಗಳೂರು, ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 250ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ನಲ್ಲಿ ಇರಿಸಿರುವುದು ತಿಳಿದುಬಂದಿದೆ.
ಹೊರ ದೇಶ, ಹೊರ ರಾಜ್ಯಗಳಿಂದ ಬಂದಿರುವವರ ದಾಖಲೆ ಮಾಡಲಾಗಿದೆ. ಈಗಾಗಲೇ ಅವರುಗಳಿಗೆ ಸೀಲ್ ಹಾಕಲಾಗಿದೆ. ಅಲ್ಲದೆ ಕೊರೊನಾ ವೈರಸ್ ಬಗ್ಗೆ ಸಮಗ್ರವಾಗಿ ಮಾಹಿತಿಯನ್ನು ನೀಡಲಾಗಿದೆ. ಯಾರು 14 ದಿನಗಳವರಗೆ ಹೊರಗಡೆ ಬರದಂತೆ ಕಟ್ಟುನಿಟ್ಟಾದ ಸೂಚನೆಗಳನ್ನು ಕೊಡಲಾಗಿದೆ.