ಕೂಡಿಗೆ, ಏ. 4: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊರ ಜಿಲ್ಲೆಯಿಂದ ಕೆಲಸ ಅರಸಿ ಬಂದಿದ್ದ ಕೂಡಿಗೆ ಗ್ರಾಮದಲ್ಲಿ ವಾಸವಿದ್ದ 17 ಜನರಿಗೆ ಇಂದು ಅಹಾರ ಕಿಟ್‍ಗಳನ್ನು ಗ್ರಾಮ ಪಂಚಾಯಿತಿ ಆವರಣದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪ್ರೇಮ ಲೀಲಾ, ಸದಸ್ಯರುಗಳಾದ ರವಿ ಕೃಷ್ಣ, ಅಭಿವೃದ್ಧಿ ಅಧಿಕಾರಿ ಶಿಲ್ಪಾ ಸೇರಿದಂತೆ ಸಿಬ್ಬಂದಿಗಳಾದ ಅನಿಲ್ ಕುಮಾರ್, ಬಾಬು, ಆನಂದ, ಶಿಶಿ ಕುಮಾರ್, ನಾಗೇಶ್ ಹಾಜರಿದ್ದರು.

ವಿದ್ಯಾರ್ಥಿಗಳಿಗೆ ವಿತರಣೆ

ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಊಟದ ಆಹಾರ ಸಾಮಗ್ರಿಗಳನ್ನು ಶಾಲಾ ಶಿಕ್ಷಕರ ವೃಂದದವರು ವಿದ್ಯಾರ್ಥಿಗಳಿಗೆ ವಿತರಿಸಿದರು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ದಾಖಲೆಗಳ ಆಧಾರದ ಮೇಲೆ ಅಕ್ಕಿ ಮತ್ತು ಬೇಳೆಯನ್ನು ವಿದ್ಯಾರ್ಥಿಗಳ ಪೋಷಕರಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರತಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸಣ್ಣಕ್ಕ, ಸಹ ಶಿಕ್ಷಕರಾದ ಕಮಲ, ವಿಜಯಲಕ್ಷ್ಮಿ ಸೇರಿದಂತೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಜರಿದ್ದರು.