ವೀರಾಜಪೇಟೆ, ಏ. 4: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಸಾರ್ವಜನಿಕರಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಜಾಗೃತಿ ಅಭಿಯಾನಕ್ಕೆ ಜೆ.ಎಂ.ಎಫ್.ಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ಆರ್. ಜಯಪ್ರಕಾಶ್ ಚಾಲನೆ ನೀಡಿದರು.
ಬಳಿಕ ಮಾತನಾಡಿ ಕೊರೊನಾ ವೈರಸ್ ಸಾಮಾನ್ಯ ರೋಗವಲ್ಲ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ನಮ್ಮನ್ನು ನಾವೇ ಸಂರಕ್ಷಿಸಿಕೊಳ್ಳುವುದರಿಂದ ಕಾಯಿಲೆಯನ್ನು ತಡೆಗಟ್ಟಬಹುದಾಗಿದೆ ಎಂದರು. ಈ ಸಂದರ್ಭ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಕೋನಪ್ಪ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಮಹಾಲಕ್ಷ್ಮಿ, ವೃತ್ತ ನಿರೀಕ್ಷಕ ಕ್ಯಾತೆಗೌಡ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್ ಉಪಸ್ಥಿತರಿದ್ದರು.