ಸಿದ್ದಾಪುರ. ಏ. 4: ಜಿಲ್ಲಾಡಳಿತವು ನಿರ್ಬಂಧದಲ್ಲಿ ಸಡಿಲಿಕೆಯನ್ನು ಮಾಡಿದ ಹಿನ್ನೆಲೆಯಲ್ಲಿ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಬರುವ ನೂಕುನುಗ್ಗಲನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿದ್ದಾಪುರ ಠಾಣಾಧಿಕಾರಿ ಬೋಜಪ್ಪ ನೇತೃತ್ವದಲ್ಲಿ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಸಿದ್ದಾಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ತರಕಾರಿ ವ್ಯಾಪಾರಿಗಳು ವಾಹನಗಳಲ್ಲಿ ತೆರಳಿ ತರಕಾರಿ ವ್ಯಾಪಾರಗಳನ್ನು ಮಾಡುತ್ತಿದ್ದಾರೆ ಇದರಿಂದಾಗಿ ಗ್ರಾಮಸ್ಥರು ಹಾಗೂ ದೂರದ ಊರಿನವರು ಪಟ್ಟಣಕ್ಕೆ ತರಕಾರಿ ಖರೀದಿಸಲು ಬರುತಿಲ್ಲ ಇನ್ನೊಂದೆಡೆ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಬಂದ ಬಳಿಕ ಬಹುತೇಕ ಕಾರ್ಮಿಕರಿಗೆ ಕೆಲಸವಿಲ್ಲದೆ ತೊಂದರೆಯಲ್ಲಿದ್ದಾರೆ.
ನೆಲ್ಲಿಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚಾಯತಿ ವತಿಯಿಂದ ಗ್ರಾಮಸ್ಥರಿಗೆ ಅಗ್ಗದ ದರದಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಚಾಲನೆಯನ್ನು ನೀಡಲಾಗಿದೆ ಎಂದು ಪಿ.ಡಿ.ಓ. ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.