ಮಡಿಕೇರಿ, ಏ.5: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 113ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾನುವಾರ ಸರಳವಾಗಿ ಆಚರಿಸಲಾಯಿತು.
ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಬಾಬು ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಇತರರು ಪುಷ್ಪ ನಮನ ಸಲ್ಲಿಸಿದರು.