ಮಡಿಕೇರಿ, ಏ. 5: ಕೊರೊನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತಾ.14ರವರೆಗೆ ಲಾಕ್‍ಡೌನ್ ಘೋಷಿಸಿದ್ದರೂ ಅನಾವಶ್ಯಕವಾಗಿ ತಿರುಗಾಡುವ ವಾಹನಗಳ ಸಂಚಾರವನ್ನು ನಿಯಂತ್ರಿಸುವ ಸಲುವಾಗಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ 73 ದ್ವಿಚಕ್ರ, 39 ಚತುಶ್ಚಕ್ರ ಹಾಗೂ 5 ಆಟೋ ರಿಕ್ಷಾಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಮುಂದೆ ಅನಾವಶ್ಯಕವಾಗಿ ರಸ್ತೆಗಿಳಿಯುವ ವಾಹನ ಸವಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗು ವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ತಿಳಿಸಿದ್ದಾರೆ.