ಮಡಿಕೇರಿ, ಏ. 6: ಮಡಿಕೇರಿಯ ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸಂತೋಷಕೂಟ ಹಾಗೂ ವಾರ್ಷಿಕ ಸಭೆಯನ್ನು ಮುಂದೂಡಲಾಗಿದೆ. ತಾ. 12ರಂದು ಈ ಕಾರ್ಯಕ್ರಮ ನಿಗದಿಯಾಗಿತ್ತು. ಇದೀಗ ಕೊರೊನಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಂದೂಡಿರುವುದಾಗಿ ಸಂಘದ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ತಿಳಿಸಿದ್ದಾರೆ.