ಮಡಿಕೇರಿ, ಏ.5 : ಕೋವಿಡ್-19 ಸಂಬಂಧ ಜಿಲ್ಲೆಯ ಪರಿಸ್ಥಿತಿ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು, ಜಿಲ್ಲೆಯಲ್ಲಿ ಕೊರೊನಾ ವೈರಸ್ ಪರಿಸ್ಥಿತಿ, ಆಸ್ಪತ್ರೆ ಸೌಲಭ್ಯಗಳು, ಸಾರಿಗೆ ಸಂಪರ್ಕ, ವೈದ್ಯರು ಮತ್ತು ಶುಶ್ರೂಶಕರ ನಿಯೋಜನೆ, ಸಾರ್ವಜನಿಕರಿಗೆ ವೈದ್ಯಕೀಯ ಸೇವೆಗಳು ಮತ್ತಿತರ ಬಗ್ಗೆ ಮಾಹಿತಿ ಪಡೆದರು.

ಜಿಲ್ಲೆಯ ಬಿಪಿಎಲ್, ಎಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರು, ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರು, ಹೀಗೆ ಎಲ್ಲಾ ಕುಟುಂಬದವರಿಗೆ ಆಹಾರ ತಲುಪಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು. ಜಿಲ್ಲಾ ಆಸ್ಪತ್ರೆಗೆ ಹೆಚ್ಚುವರಿ ವೆಂಟಿಲೇಟರ್‍ಗಳನ್ನು ತರಿಸಿಕೊಳ್ಳಬೇಕು, ಯಾವುದೇ ರೀತಿಯ ಸಮಸ್ಯೆಗಳು ಎದುರಾದಲ್ಲಿ ನಿಭಾಯಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ವೈದ್ಯರು, ಶುಶ್ರೂಶಕರು ಮತ್ತು ಪೊಲೀಸರಿಗೆ ಮಾಸ್ಕ್, ಸ್ಯಾನಿಟೈಸರ್ ಮತ್ತು ಗ್ಲೌಸ್ ಜಿಲ್ಲೆಯ ಬಿಪಿಎಲ್, ಎಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರು, ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರು, ಹೀಗೆ ಎಲ್ಲಾ ಕುಟುಂಬದವರಿಗೆ ಆಹಾರ ತಲುಪಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು. ಜಿಲ್ಲಾ ಆಸ್ಪತ್ರೆಗೆ ಹೆಚ್ಚುವರಿ ವೆಂಟಿಲೇಟರ್‍ಗಳನ್ನು ತರಿಸಿಕೊಳ್ಳಬೇಕು, ಯಾವುದೇ ರೀತಿಯ ಸಮಸ್ಯೆಗಳು ಎದುರಾದಲ್ಲಿ ನಿಭಾಯಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ವೈದ್ಯರು, ಶುಶ್ರೂಶಕರು ಮತ್ತು ಪೊಲೀಸರಿಗೆ ಮಾಸ್ಕ್, ಸ್ಯಾನಿಟೈಸರ್ ಮತ್ತು ಗ್ಲೌಸ್ ಮಾಹಿತಿ ನೀಡಿದರು.

ಪ್ರೊಬೆಷನರಿ ಐಎಎಸ್ ಅಧಿಕಾರಿ ಯುಕೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಪೌರಾಯುಕ್ತರಾದ ಎಂ.ಎಲ್ ರಮೇಶ್, ಡಿವೈಎಸ್‍ಪಿ ದಿನೇಶ್ ಕುಮಾರ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೆಶಕರಾದ ಗೌರವ್ ಕುಮಾರ್ ಶೆಟ್ಟಿ, ವೈದ್ಯಕೀಯ ಕಾಲೇಜಿನ ಅಧೀಕ್ಷಕÀ ಡಾ. ಲೋಕೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ವೈದ್ಯಕೀಯ ಕಾಲೇಜಿನ ಡಾ. ಮಂಜುನಾಥ್, ಡಾ.ವಿಶಾಲ್, ನೋಡಲ್ ಅಧಿಕಾರಿಗಳಾದ ಶ್ರೀನಿವಾಸ್, ಅನನ್ಯ ವಾಸುದೇವ್ ಇತರರು ಇದ್ದರು.